ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ.


ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಜನನಿಬಿಡ ಹೋಟೆಲ್ ಪ್ರವೇಶಿಸಿ ಬಾಂಬ್ ಸ್ಫೋಟಿಸಿ ಅಮಾಯಕರನ್ನು ಗಾಯಗೊಳಿಸಿ ತೀವ್ರ ಆತಂಕದ ವಾತಾವರಣ ಸೃಷ್ಠಿಸಿದೆ.

ಸುಭದ್ರ ಕರ್ನಾಟಕಕ್ಕೆ ಗಂಡಾಂತರದ ಆತಂಕ ತರುವ ಚಟುವಟಿಕೆಗಳನ್ನು ಬಗ್ಗುಬಡಿಯುವಲ್ಲಿ ಮೀನಾಮೇಷ ಎಣಿಸುತ್ತಾ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ಲೆಕ್ಕಾಚಾರದ ಹೆಜ್ಜೆಗಳ ದಾರಿ ಬದಲಿಸಿಕೊಳ್ಳದೇ ಹೋದರೆ ಅಧಿಕಾರದಿಂದ ಕೆಳಗಿಳಿಸಿ ವಿಧಾನ ಸೌಧದಿಂದ ಹೊರ ಕಳಿಸುವ ದಾರಿ ತೋರಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ.

By admin

Leave a Reply

Your email address will not be published. Required fields are marked *

Verified by MonsterInsights