ರಾಮನಗರ : ಲೋಕಾಸಮರ ಸಮೀಪಿಸುತ್ತಿದ್ದು ಚುನಾವಣೆಯ ರಣಕಾವು ರಂಗೇರುತ್ತಿರುವ ಬೆನ್ನಲ್ಲೆ ಬಿಜೆಪಿ ತನ್ನ ಜಿಲ್ಲಾ ಘಟಕಗಳನ್ನು ಪುನರ್ ರಚಿಸಿ ಸಂಘಟನೆಗೆ ಇಂಬುನೀಡುತ್ತಿದೆ. ಇದರ ಬೆನ್ನಲ್ಲೆ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಹೋರಾಟಗಾರ ಆನಂದಸ್ವಾಮಿ ಆಯ್ಕೆಯಾಗಿದ್ದಾರೆ.
ಇದರಿಂದ ಬಿಜೆಪಿಗರಲ್ಲಿ ಹೊಸ ಹುಮ್ಮಸ್ಸು ತುಂಬಿ ಕಾರ್ಯಕರ್ತರಿಗೆ ಚುನಾವಣೆಗೆ ಸಜ್ಜಾಗುವಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆನಂದಸ್ವಾಮಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.