
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪ್ರೀಮಿಯರ್ ಲೀಗ್ 2024 ರ ಫೈನಲ್ನ ಗೆಲುವಿನೊಂದಿಗೆ ತಮ್ಮ ಮೊದಲ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಫ್ರಾಚೈಸ್ ತಮ್ಮ 16 ವರ್ಷದಲ್ಲಿ ಇತಿಹಾಸದಲ್ಲಿ ಅವರ ಮೊದಲ ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ಮಹಿಳಾ ತಂಡದ ಗೆಲುವು ಆರ್ಸಿಬಿ ಪುರುಷರ ತಂಡಕ್ಕೂ ಅತಿ ಸಂತಸ ತಂದಿದೆ. ಆರ್ಸಿಬಿ ಗೆದ್ದ ತಕ್ಷಣ ಖುಷಿ ತಾಳಲಾರದೆ ವಿರಾಟ್ ಕೊಹ್ಲಿ ಅವರು ಸ್ಮೃತಿ ಮಂಧಾನಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ.
ಪಂದ್ಯ ಮುಗಿದ ನಂತರ, ವಿರಾಟ್ ಕೊಹ್ಲಿ ಅವರು ಆರ್ಸಿಬಿ ನಾಯಕಿ ಸ್ಮೃತಿ ಮಧಾನ ಅವರಿಗೆ ವಿಡಿಯೋ ಕಾಲ್ ಮಾಡಿದ್ದು, ಪಂದ್ಯದಲ್ಲಿ ಗೆಲುವು ಮತ್ತು ಕಪ್ ಗೆದ್ದಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
#RCBUnbox
Virat Kohli was literally dancing on the video call. This Trophy matters sooo much to him#ViratKohli𓃵 pic.twitter.com/uFbIxF037d— SAMAR 🪐 (@museumofrecord) March 18, 2024
ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಮೃತಿ ಮಂಧಾನ ಮತ್ತು ತಂಡಕ್ಕೆ ಟ್ರೋಫಿ ಗೆದ್ದ ಬಳಿಕ ವಿಶೇಷ ಸಂದೇಶವನ್ನು ಹಂಚಿಕೊಂಡರು. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಸೂಪರ್ ವುಮೆನ್ ಎಂಬ ಶೀರ್ಷಿಕೆ ಬರೆದು ಫೋಟೋ ಹಂಚಿಕೊಂಡಿದ್ದಾರೆ.




