ಕ್ರೈಂ ಸ್ಟೋರಿರಾಜ್ಯಸುದ್ದಿ

ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮ

ಶಿವಮೊಗ್ಗ: ಆಸ್ತಿಗಾಗಿ, ಇಬ್ಬರು ಸಹೋದರರು ಸೇರಿ ಕಾರು ಹತ್ತಿಸಿ ಅಣ್ಣನನ್ನೇ ಹತ್ಯೆಗೈದ ಘಟನೆ​​ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿ ಫೆ.29ರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ರಫೀಕ್ ಮೃತ ವ್ಯಕ್ತಿ. ಆರೋಪಿಗಳಾದ ಇನಾಯತ್​​ ಮತ್ತು ಅಕ್ಕನ ಮಗ ಸಮೀರ್, ​ರಸ್ತೆ ಬಳಿ ಕಾರು ಹತ್ತಿಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಈ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಆರೋಪಿಗಳು ಬಂಧಿಸಿದ್ದಾರೆ.

ಕಾರು ಹತ್ತಿಸಿ ಹತ್ಯೆ ಮಾಡಿರುವ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ. ಇನ್ನು ಕಾರು ಹತ್ತಿಸಿದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರಫೀಕ್‌, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಈ ಸಂಬಂಧ ಆನಂದಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಆದರೆ, ಆರೋಪಿಗಳು ಪೊಲೀಸರಿಗೆ ಯಾವ ಸಾಕ್ಷಿಯು ಸಿಗಬಾರದೆಂದು ಸಾಗರ ತಾಲೂಕಿನ ಆನಂದಪುರದಲ್ಲಿರುವ ಮುರುಘಾ ಮಠದ ಆವರಣದಲ್ಲಿ ಬಟ್ಟೆ ಬದಲಿಸಿಕೊಂಡಿದ್ದರು. ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ, ಇದು ಕುಟುಂಬದವರೇ ಆಸ್ತಿಗಾಗಿ ಮಾಡಿದ ಕೊಲೆ ಎಂದು ತಿಳಿದು ಬಂದಿದೆ.

Comments (0)

Your email address will not be published. Required fields are marked *

Back to top button