Wednesday, April 30, 2025
35.6 C
Bengaluru
LIVE
ಮನೆ#Exclusive NewsTop Newsನಾವು ನುಡಿದಂತೆ ನಡೆದಿದ್ದೇವೆ, ನಾವು ಅವರಲ್ಲ ; ಮಧು ಬಂಗಾರಪ್ಪ

ನಾವು ನುಡಿದಂತೆ ನಡೆದಿದ್ದೇವೆ, ನಾವು ಅವರಲ್ಲ ; ಮಧು ಬಂಗಾರಪ್ಪ

ಶಿವಮೊಗ್ಗ : ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿಕಾರಿಪುರದ ತಾಲೂಕು ಆಡಳಿತ ಸಭಾಂಗಣದ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪೂಜ್ಯ ತಂದೆಯವರಾದ ಬಂಗಾರಪ್ಪನವರು ತಮ್ಮ ಅಧಿಕಾರ ಅವಧಿಯಲ್ಲಿ ಆಶ್ರಯ, ಆರಾಧನಾ, ಗ್ರಾಮೀಣ ಕೃಪಾಂಕ ದಂತಹ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದರು. ಮೂರು ದಶಕಗಳ ಹಿಂದೆ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಎಂದು ಕೂಡ ಚಾಲ್ತಿಯಲ್ಲಿರುವುದು ಹರ್ಷದ ಸಂಗತಿಯಾಗಿದೆ. ರಾಜ್ಯ ಬರಗಾಲದಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಭತ್ತ, ಜೋಳ, ರಾಗಿಯಂತಹ ಬಿತ್ತನೆ ಬೀಜಗಳನ್ನು ಜಿಲ್ಲೆಯ ರೈತರ ಮನೆ ಬಾಗಿಲಿಗೆ ತಲುಪಿರುವುದು ವಿಶೇಷವಾಗಿತ್ತು. ಅಂತಹ ಜನ ನಾಯಕರ ಮಾರ್ಗದರ್ಶನದಂತೆ ಆಡಳಿತರೂಢ ಸರಕಾರ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆ ಸಮಿತಿಯ ಸದಸ್ಯನಾಗಿದ್ದೆ ಎಂಬ ಹೆಮ್ಮೆ ನನಗಿದೆ ಎಂದರು.

ಮನೆ ಒಡತಿಗೆ 2000 ರೂ.ಗಳ ಸಹಾಯಧನ ನೀಡುವ ಗೃಹಲಕ್ಷ್ಮಿ, ರಾಜ್ಯದ ಪ್ರತಿ ಮನೆ ಮನೆಗೆ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ, ಮುಂತಾದ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ. ಎಂದ ಅವರು, ಇದು ನಿಮ್ಮದೇ ಸರ್ಕಾರ ಇದನ್ನು ಪೋಷಿಸಿ ಬೆಳೆಸುವ ಹೊಣೆಗಾರಿಕೆಯು ನಿಮ್ಮದೇ ಆಗಿದೆ ಎಂದವರು ನುಡಿದರು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ದಿ ಪಡಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಶಿಕಾರಿಪುರ ತಹಶೀಲ್ದಾರ್ ಮಲ್ಲೇಶ್ ಪೂಜಾರ್, ಸಾಗರ ಉಪವಿಭಾಗಾಧಿಕಾರಿ ಯತೀಶ್ ಆರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಪುರಸಭೆ ಮುಖ್ಯಾಧಿಕಾರ ಹಾಗೂ ಪುರಸಭಾ ಸದಸ್ಯರಾದ ಎಸ್.ಪಿ ನಾಗರಾಜಗೌಡ, ದರ್ಶನ್ ಹುಳ್ಳಿ ಸೇರಿದಂತೆ ವಿವಿಧ ಇಲಾಖೆಗಳು ಉಪಸ್ಥಿತರಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments