ಫ್ರೀಡಂ ಟಿವಿ ಪ್ರಸಾರ ಮಾಡಿದ್ದ ವರದಿ ಬಿಗ್ ಇಂಪ್ಯಾಕ್ಟ್ ಆಗಿದೆ. ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲ, ಇದು ಹಿಂದೂ ವಿರೋಧಿ ಸರ್ಕಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ಬೆಂಗಳೂರಿನ ನಗರತ್ ಪೇಟೆಯಲ್ಲಿ ಭಾರಿ ಹೈಡ್ರಾಮಾ ನಡೆಯಿತು. ಈ ವೇಳೆ ಪ್ರತಿಭಟನಕಾರರನ್ನು ಪೊಲೀಸರು ಎಳೆದಾಡಿದರು. ಶಾಸಕ ಸುರೇಶ್ಕುಮಾರ್ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ತಳ್ಳಾಡಿದರು. ಶೋಭಾ ಕರಂದ್ಲಾಜೆಯವರನ್ನು ಪೊಲೀಸರು ವಶಕ್ಕೆ ಪಡೆದರು. ಹಲಸೂರು ಪೊಲೀಸ್ ಠಾಣೆಗೆ ಕರೆದೊಯ್ದರು. ಬಳಿಕ ಅಲ್ಲಿಂದ ಸಿಎಆರ್ ಗ್ರೌಂಡಿಗೆ ಕರೆದೊಯ್ದರು ವ್ಯಾಪಾರಿ ಮುಖೇಶ್ ಪರವಾಗಿ ಬಿಜೆಪಿ ಇಂದು ರ್ಯಾಲಿಗೆ ಕರೆ ನೀಡಿತ್ತು. ರ್ಯಾಲಿ ವೇಳೆ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಯಿತು. ಪೊಲೀಸರು ಹಾಗೂ ಹಿಂದೂ ಕಾರ್ಯಕರ್ತರ ಮಧ್ಯ ಮಾತಿನ ಚಕಮಕಿ ನಡೆಯಿತು.