ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಲೋಕಸಭಾ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಕೋಯಮತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿದ ಅಣ್ಣಾಮಲೈ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುವುದು ಖಚಿತ. ತಮಿಳುನಾಡಿನಲ್ಲಿ ಬಿಜೆಪಿ ಪರ ಅಲೆ ಕಂಡುಬರುತ್ತಿದೆ. ನನಗೂ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳಿಗೆ ತಮಿಳುನಾಡಿನ ಮತದಾರರು ಆಶೀರ್ವಾದ ಮಾಡಲಿದ್ದಾರೆ. ನಮ್ಮ ಪರ ಜನಾದೇಶ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ಧಾರೆ.
ಈ ಬಾರಿಯ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಕನಿಷ್ಠ ಐದಾರು ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ.