20 ಲೋಕಸಭಾ ಸ್ಥಾನ ಗೆಲ್ಲದಿದ್ದರೆ ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತೆ ಎಂದು ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ಗೆ ಹೆಚ್ಚಿನ ಸೀಟ್ ಗೆಲ್ಲಿಸಲಿಲ್ಲ ಅಂದ್ರೆ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜಿನಾಮೆ ಕೊಡಬೇಕಾಗುತ್ತೆ. ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯರನ್ನು ಉಳಿಸುವ ಕೆಲಸ ನಾವೆಲ್ಲ ಮಾಡಬೇಕು ಎಂದು ಕರೆ ನೀಡಿದರು. ತುಮಕೂರಿನ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರದ ವೇಳೆ ಗುಬ್ಬಿ ಶಾಸಕ ಸಿ.ಎಂ.ರಾಜೀನಾಮೆ ವಿಷಯ ಪ್ರಸ್ತಾಪಿಸಿದ್ದಾರೆ.
ಈ ಮೂಲಕ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬರುತ್ತಾ ಎಂಬ ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದಾರೆ.