ತುಮಕೂರು : ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಎಳೆದೊಯ್ದು 23 ವರ್ಷದ ಯುವಕನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಮಧುಗಿರಿ ಮೂಲದ ಯುವಕನಿಂದ ಅತ್ಯಾಚಾರ ಮಾಡಲಾಗಿದೆ. ಈ ವೇಳೆ ಬಾಲಕಿ ಕಿರುಚಿದ ಕಾರಣ ಸ್ಥಳೀಯರು ದೌಡಾಯಿಸಿದ್ದು, ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯನ್ನು ಕೊರಟೆಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಧುಗಿರಿ ತಾಲೂಕಿನ ಐಡಿ ಹಳ್ಳಿಯ ಪವನ್ (23) ಎಂಬುವವನು ಆರೋಪಿಯಾಗಿದ್ದಾನೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಖಾಯ್ದೆಯಲ್ಲಿ ಪ್ರಕರಣ ದಾಖಲಾಗಿದೆ.