ತುಮಕೂರು: ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ತಾನೇ ಹೆಣೆದ ಬಲೆಗೆ ಸ್ವಾಮೀಜಿ ಯೊಬ್ಬರು ಪೋಕ್ಸೋ ಕೇಸ್ ಅಡಿ ಜೈಲು ಪಾಲಾಗಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲಮಂಜುನಾಥ್ ಸ್ವಾಮೀಜಿ ಬಂಧಿತ ಆರೋಪಿಯಾಗಿದ್ದಾರೆ. ಕಳೆದ ಫೆಬ್ರುವರಿ 10 ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿಕೊಂಡು, ನನ್ನನ್ನು ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆಂದು ಸ್ವಾಮೀಜಿಯ ಆಪ್ತ ಸಹಾಯಕ ಅಭಿಲಾಷ್ ಎಂಬಾತನಿಂದ ಎಫ್ಐಆರ್ ದಾಖಲು ಮಾಡಿದ್ದ ಸ್ವಾಮೀಜಿ. ಸ್ವಾಮೀಜಿಯ ಸೇವಕ ಅಭಿಷೇಕ್ ಅಂಡ್ ಟೀಂ ನಿಂದ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್ ಇಡಲಾಗಿದೆ ಎಂದು 6 ಜನರ ಮೇಲೆ ದೂರು ನೀಡಲಾಗಿತ್ತು. ಈ ಪ್ರಕರಣ ಬೆನ್ನಲ್ಲೇ ಸ್ವಾಮೀಜಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಮಠದಲ್ಲೇ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳದ ಬಗ್ಗೆ ಅಭಿಷೇಕ್ ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದೆ. ತಕ್ಷಣ ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆಮ ಅಲ್ಲದೆ ತಡರಾತ್ರಿಯೇ ತುಮಕೂರು ಎಸ್ ಪಿ ಅಶೋಕ್ ಕೆವಿ ನೇತೃತ್ವದಲ್ಲಿ ಇಬ್ಬರನ್ನು ಬಂಧಿಸಿ ತನಿಖೆ
ಮುಂದುವರಿಸಿದ್ದಾರೆ.