ತುಮಕೂರು : ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು. ಈ ಹಿನ್ನೆಲೆ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಶಾಸಕ ಎಂ.ಟಿ.ಕೃಷ್ಣಪ್ಪ, ಬಿಜೆಪಿ ಮಾಜಿ ಶಾಸಕ ಮಸಾಲೆ ಜಯರಾಂ ಪ್ರಚಾರ ನಡೆಸಿದ್ದಾರೆ.
ಶಾಸಕ ಎಂ.ಟಿ.ಕೃಷ್ಣಪ್ಪ, ಬಿಜೆಪಿ ಮಾಜಿ ಶಾಸಕ ಮಸಾಲೆ ಜಯರಾಂ ಅವರು, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಪ್ರಚಾರ ಆರಂಭಿಸಿದ್ದಾರೆ. ಅಭ್ಯರ್ಥಿ ಸೋಮಣ್ಣ, ಮುಖಂಡ, ಗೋಪಾಲಯ್ಯ ಹಾಗೂ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಸಭೆ ಭಾಗಿಯಾಗಿದ್ರು. ಪರಸ್ಪರ ಪಕ್ಷದ ಶಾಲು ಬದಲಾಯಿಸಿಕೊಂಡು ನಾಯಕರ ಶಕ್ತಿ ಪ್ರದರ್ಶನ ಮಾಡಿದ್ದರು. ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಪರ ಕಾರ್ಯಕರ್ತರು ಘೋಷಣೆ ಕೂಗಿದರು.


