ತುಮಕೂರು : ಆಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದು ಬಿಜೆಪಿ ಆಗ್ರಹಿಸಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಅವರು ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ, ಆದ್ರೆ ಸರ್ಕಾರಿ ರಜೆ ಇಲ್ಲ. ನಾಳೆ ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ -ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ. ನಾಳೆ ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ಧೆನೆ . ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟನೆಗೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.