ತುಮಕೂರು : ಕೇಂದ್ರ ಸರ್ಕಾರ ನಿಗದಿಪಡಿಸಿರುವ 12 ಸಾವಿರ ರೂಪಾಯಿ ಜೊತೆಗೆ, ರಾಜ್ಯ ಸರ್ಕಾರ 3 ಸಾವಿರ ರೂಪಾಯಿ ಸೇರಿಸಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಸಲು ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಹೋರಾತ್ರಿ ಧರಣಿ ನಡೆಸಿದರು.
ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದರು. ಮೊದಲಿಗೆ ತುಮಕೂರಿನ ಬಿ.ಜಿ.ಎಸ್ ವೃತ್ತದಿಂದ ಮೆರವಣಿಗೆಯಲ್ಲಿ ಆಗಮಿಸಿದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ, ಕೇಂದ್ರ ಸರ್ಕಾರ ನಿಗದಿ ಮಾಡಿರುವ 12 ಸಾವಿರ ರೂ.ಗಳ ಜೊತೆಗೆ ರಾಜ್ಯ ಸರ್ಕಾರ 3 ಸಾವಿರ ರೂ. ಸೇರಿಸಿ ನಾಪೆಡ್ ಕೇಂದ್ರದ ಮೂಲಕ ಖರೀದಿಸಲು ಕ್ರಮ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರೈತರು, ಕಾರ್ಮಿಕರು, ಸೈನಿಕರು ಉಳಿದರೆ ಮಾತ್ರ ದೇಶದ ಅಭಿವೃದ್ಧಿ. ಹೀಗಿರುವಾಗ ಸರ್ಕಾರಗಳು ರೈತರನ್ನು ಕಡೆಗಣಿಸುತ್ತಲೇ ಬರುತ್ತಿವೆ. ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚು ಮಾಡಬೇಕು ಎಂದು ನಿರಂತರ ಹೋರಾಟ ಮಾಡುತ್ತಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದೀಗ ಬೆಂಬಲ ಬೆಲೆ ನಿಗಧಿ ಪಡಿಸುವವರೆಗೂ ಧರಣಿ ಕೈ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ.