ತುಮಕೂರು: ಬಿಜೆಪಿ ಹೈಕಮಾಂಡ್ ಕರ್ನಾಟಕದ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದೆ. ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಚಿವ ಮಾಧುಸ್ವಾಮಿ ಅವರು ಸಹ ಬೇಡಿಕೆ ಇಟ್ಟಿದ್ರು. ಆದರೆ, ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಮಣೆ ಹಾಕಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ, ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ.ಸೋಮಣ್ಣ ಸ್ಪರ್ಧೆಯನ್ನು ನಿರಾಕರಿಸಿರುವ ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡಿರುವ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಗೆ ಕಾಂಗ್ರೆಸ್ ಗಾಳ ಹಾಕಿದೆ. ವಿ.ಸೋಮಣ್ಣ ಸ್ಪರ್ಧೆ ವಿಚಾರದಲ್ಲಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧವೂ ಬೇಸರ ಹೊರಹಾಕಿದ್ದರು. ಸೋಮಣ್ಣಪರ ಕೆಲಸ ಮಾಡುವುದಿಲ್ಲ ಎಂದಿರುವ ಅವರು, “ಮುಂದಿನ ನಡೆ ಬಗ್ಗೆ ಸದ್ಯ ಇನ್ನೂ ತೀರ್ಮಾನಿಸಿಲ್ಲ” ಎಂದು ಹೇಳಿದ್ದರು. ಈಗ ಕಾಂಗ್ರೆಸ್ ಸೇರುವ ಚರ್ಚೆ ಶುರುವಾಗಿದೆ.