ತುಮಕೂರು : ನಾನು ತುಮಕೂರಿನಿಂದ ಸ್ಪರ್ಧೆ ಮಾಡಲ್ಲ. ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲ್ಲೇ ಸ್ಪರ್ಧೆ ಮಾಡ್ತೀನಿ ಎಂದು ತುಮಕೂರಿನಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದರು.
ತುಮಕೂರಿನಿಂದ ಸ್ಪರ್ಧೆ ಮಾಡ್ತೀನಿ ಅನ್ನೋದು ಊಹಾಪೋಹಾ ಅಷ್ಟೇ. ನಾನು ಇವತ್ತು ಕೊಬ್ಬರಿ ಬೆಳೆಗಾರರ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನಫೇಡ್ ಕೇಂದ್ರ ಉದ್ಘಾಟನೆಗೆ ಬಂದಿದ್ದೇನೆ. ತುಮಕೂರಿನಿಂದ ಸ್ಪರ್ಧೆ ಮಾಡುವಂತಹ ಯಾವುದೇ ಯೋಚನೆಯಿಲ್ಲ. ಕೇಂದ್ರ ಸರಕಾರ ನಿಗದಿಪಡಿಸಿರುವ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 12,000 ರೂ. ಬೆಂಬಲ ಬೆಲೆ ಯೋಜನೆಯಲ್ಲಿ ರೈತರಿಂದ ಕೊಬ್ಬರಿ ಖರೀದಿ ಮಾಡಲಾಗುತ್ತದೆ. ಜತೆಗೆ ರಾಜ್ಯ ಸರಕಾರ ಭರವಸೆ ನೀಡಿದಂತೆ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1,500 ರೂ. ಸೇರಿಸಿ ತಲಾ ಕ್ವಿಂಟಾಲ್ ಕೊಬ್ಬರಿಯನ್ನು 13,500 ರೂ.ಗೆ ಖರೀದಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.