ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಅಡ್ಡ ಮತದಾನ ಮಾಡಿದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಮತದಾನ ಮಾಡದೇ ದೂರ ಉಳಿದ ಶಾಸಕ ಶಿವರಾಂ ಹೆಬ್ಬಾರ್ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅಡ್ಡ ಮತದಾನ ಮಾಡಿರುವುದು ಅಕ್ಷಮ್ಯ ಅಪರಾಧ. ಇಬ್ಬರು ಪಕ್ಷದ ಚಿಹ್ನೆ ಮೇಲೆ ಗೆದ್ದಿದ್ದಾರೆ. ಅಡ್ಡ ಮತದಾನ ಮಾಡಿದವರ ವಿರುದ್ದ ಕ್ರಮ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಆಮಿಷ ಒಡ್ಡದೇ ಈ ರೀತಿ ಮಾಡಲು ಸಾಧ್ಯವಿಲ್ಲ. ನಿರ್ಮಲಾ ಸೀತಾರಾಮನ್ ಭೇಟಿಗೆ ಯತ್ನಿಸಿರುವುದು ಬೋಗಸ್. ಇಬ್ಬರು ನಾಯಕರು ಬಿಜೆಪಿಗೆ ಮೋಸ ಮಾಡಿದ್ದಾರೆ. ಬಿಜೆಪಿಗೆ ಮೋಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.