ವಿಜಯನಗರ : ವಿಜಯನಗರ ಸಾಮ್ರಾಜ್ಯದ ಗತವೈಭವ ದಾರುವ ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಮೂರು ದಿನಗಳ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಂಪಿ ಉತ್ಸವ ವೀಕ್ಷಣೆಗಾಗಿ ಬೇರೆ ಬೇರೆ ಕಡೆಯಿಂದ ಸಾವಿರಾರು ಜನರು ಆಗಮಿಸಿದ್ದರು.
ಹಂಪಿಯ ಆನೆಲಾಯದ ಬಳಿ ಏರ್ಪಡಿಸಿರುವ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಗೆ ವೇದಿಕೆಯಲ್ಲಿ ಸಿಎಂ ಚಾಲನೆ ನೀಡಿದರು. ವಿಜಯನಗರ ಸಾಮ್ರಾಜ್ಯದ ವೈಭವ ಬಿಂಬಿಸುವ ಧ್ವನಿ ಮತ್ತು ಬೆಳಕಿನ ಕಾರ್ಯಕ್ರಮ ಫೆ. 8ರವರೆಗೆ ನಡೆಯಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೆಶ್ವರ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಮ್ಮದ್, ಸಚಿವ ಬಿ. ನಾಗೇಂದ್ರ, ಪದ್ಮಶ್ರೀ ಮಂಜಮ್ಮ ಜೋಗತಿ, ಹೊಸಪೇಟೆ ಶಾಸಕ ಗವಿಯಪ್ಪ, ಬಳ್ಳಾರಿ ಶಾಸಕ ನಾ.ರಾ ಭರತ್ ರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.