ವಿಜಯಪುರ : ಧ್ವಜರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಹಿರೆರೂಗಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ವ್ಯಕ್ತಿ ಅದೇ ಗ್ರಾಮದ ಮಲ್ಲು ಗಿನ್ನಿ ಎನ್ನಲಾಗುತ್ತಿದೆ. ಗ್ರಾಮ ಪಂಚಾಯತಿಯಲ್ಲಿ ಧ್ವಜರೋಹಣ ನಡೆಯುತ್ತಿದ್ದ ಸಂದರ್ಭದಲ್ಲಿ ಗುಂಡು ಹಾರಿಸಿದ್ದಾನೆ.
ಗ್ರಾಮ ಪಂಚಾಯತಿಯಲ್ಲಿ ಧ್ವಜರೋಹಣ ನಡೆಯುತ್ತಿದ್ದ ಸಂದರ್ಭದಲ್ಲಿ ಪಂಚಾಯತಿ ಎದುರಿಗೆ ಮಲ್ಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡು ಗ್ರಾಮಪಂಚಾಯತಿ ಅಧ್ಯಕ್ಷೆ ಸೋಮವ್ವ ಅವರ ತೊಡೆಗೆ ತಾಗಿದೆ. ಇನ್ನು ಮಿಸ್ ಫೈರ್ನಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ತಗುಲಿದೆ ಎನ್ನಲಾಗಿದೆ.