ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸುವುದಾಗಿ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಘೋಷಿಸಿದ್ದಾರೆ. ವಿದ್ಯಾವಂತರಾಗಿರುವ ತಮ್ಮ ಪುತ್ರ ಅಲೋಕ್ ವಿಶ್ವನಾಥ್ ಅವರ ಬಗ್ಗೆ ಕ್ಷೇತ್ರದಲ್ಲಿ ಒಲವು ಇದೆ ಎಂಬುದನ್ನು ಸಮೀಕ್ಷೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರವಾಸವನ್ನೂ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಲಾಗಿದೆ ಎಂದರು.
ನಾನು ಪಕ್ಷದ ನಿಷ್ಠ ನಾಗಿರುವ ಶಿಸ್ತಿನ ಸಿಪಾಯಿ. ನನಗೆ ಚಮಚಾಗಿರಿ ಮಾಡಿ ಗೊತ್ತಿಲ್ಲ, ಲಾಬಿಯನ್ನೂ ಮಾಡುವುದಿಲ್ಲ. ಸಮೀಕ್ಷೆಯ ವಾಸ್ತವಾಂಶವನ್ನು ವರಿಷ್ಠರಿಗೆ ತಿಳಿಸಿದ್ದೇನೆ ಎಂದರು. ಒಂದು ವೇಳೆ ಅಲೋಕ್ ವಿಶ್ವನಾಥ್ ಗೆ ಟಿಕೆಟ್ ನೀಡದಿದ್ದರೆ ನಾನೇ ಅಭ್ಯರ್ಥಿ ಆಗುತ್ತೇನೆ. ನನಗೇ ಟಿಕೆಟ್ ನೀಡುವಂತೆ ಪಕ್ಷದ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು. ಬಿಜೆಪಿಯ ಭದ್ರಕೋಟೆ ಆಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕೈ ತಪ್ಪಬಾರದು ಎಂಬ ಕಾರಣಕ್ಕೆ ನಾನೇ ಅಭ್ಯರ್ಥಿಯಾಗಲು ನಿರ್ಧರಿಸಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.