
ಬೆಂಗಳೂರು: ಖ್ಯಾತ ನಟಿ, ಬಿಗ್ ಬಾಸ್ ಕನ್ನಡ ಸೀಸನ್ 10 ಸ್ಪರ್ಧಿ ಸಿರಿ ಅವರಿಗೆ ಮದುವೆ ಯಾವಾಗ? ಇನ್ನೂ ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳು ಎದುರಾಗುತ್ತಲೇ ಇದ್ದವು. ಈಗ ಸಿರಿ ಅವರಿಗೆ ಮದುವೆಯಾಗಿದೆ. ಹೌದು, ಸೋಶಿಯಲ್ ಮೀಡಿಯಾದಲ್ಲಿ ಸಿರಿ ಮದುವೆ ವಿಡಿಯೋ ವೈರಲ್ ಆಗ್ತಿದೆ. ಕನ್ನಡದ ಅನೇಕ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ನಟಿಸಿರುವ ಸಿರಿ ಮದುವೆ ಬಗ್ಗೆ ಆಗಾಗ ಪ್ರಶ್ನೆ ಏಳುತ್ತಲೇ ಇರುತ್ತದೆ.
ಹುಡುಗ ಯಾರು? ಎಲ್ಲಿಯವ್ರು?
ಎರಡು ದಿನಗಳ ಹಿಂದೆ ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೋ ವೈರಲ್ ಆಗಿತ್ತು. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹುಡುಗ ಮಂಡ್ಯ ಮೂಲದವನಾಗಿದ್ದು, ಬೆಂಗಳೂರಿನಲ್ಲಿದ್ದಾರೆ. ಪ್ರಭಾಕರ್ ಎಂದು ಹೆಸರು. ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ನಡೆದಿದೆ. ಹೇಗೆ ಪರಿಚಯ ಆಯ್ತು? ಈ ಬಗ್ಗೆ ಮಾಹಿತಿ ಇಲ್ಲ. ಇನ್ನೂ ಮದುವೆ ಬಗ್ಗೆ ಸಿರಿ ಅವರು ಎಲ್ಲಿಯೂ ಹೇಳಿಕೊಂಡಿಲ್ಲ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com




