Wednesday, April 30, 2025
35.6 C
Bengaluru
LIVE
ಮನೆUncategorizedಲಕ್ಷ ಲಕ್ಷ ಹಣ ಪೊಲೀಸರ ವಶಕ್ಕೆ!

ಲಕ್ಷ ಲಕ್ಷ ಹಣ ಪೊಲೀಸರ ವಶಕ್ಕೆ!

ಹುಬ್ಬಳ್ಳಿ : ಲೋಕ ಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ,ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಅಲ್ಲಲ್ಲಿ ಚೆಕ್ ಪೋಸ್ಟ್ ನಿರ್ಮಿಸಿದ್ದಾರೆ .
ದಾಖಲೆ ಇಲ್ಲದೆ ಸಾಗಾಟವಾಗುತ್ತಿದ್ದ 3ಲಕ್ಷ 82 ಸಾವಿರ ನಗದು ಹಣವನ್ನು ಚೆಕ್ ಪೋಸ್ಟ್ ತಪಾಸಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಸುಳ್ಳ ರೋಡ್ ಕ್ರಾಸ್ನ ಚೆಕ್ ಪೋಸ್ಟ್ನಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ , ಎಸ್ ಎಸ್ ಟಿ ಹಾಗೂ ಎಫ್ ಎಸ್ ಟಿ 3 ರ, ನಾಗಾ ನಾಯ್ಕ ,ಪೋಲೀಸ್ ಸಿಬ್ಬಂದಿಗಳು ತಡೆದು ತಪಾಸಣೆ ಮಾಡಿದಾಗ, ಕಾರಿನಲ್ಲಿ ಓಂಪ್ರಕಾಶ್ ಎನ್ನುವವರಿಗೆ ಸೇರಿದ್ದ ದಾಖಲೆ ಇಲ್ಲದ 3,82,000 ನಗದು ಪತ್ತೆಯಾಗಿದ್ದು, ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ, ಹು-ಧಾ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಮಾಧ್ಯಮ ಪ್ರಕಟನೆಯ ಮೂಲಕ ಮಾಹಿತಿ ನೀಡಿದ್ದಾರೆ. ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಪೋಲೀಸ್ ಇನ್ಸ್ಪೆಕ್ಟರ್ ಕಿರಣ್ ಕುಮಾರ,ಎ.ಎಸ್.ಐ ಆರ್ ಜಿ ನಾಯ್ಕ, ಎಎಸ್ ಐ ಜಿ.ಸಿ.ಕಡೇಮನಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ವಶಪಡಿಸಿಕೊಂಡಿರುವ ದಾಖಲೆ ಇಲ್ಲದ ಹಣವನ್ನು ತಕ್ಷಣೆ ಖಜಾನೆಯಲ್ಲಿ ಡಿಪಾಜಿಟ್ ಮಾಡಿದ್ದು, ಮುಂದಿನ ಕ್ರಮಕ್ಕಾಗಿ ಜಿಲ್ಲಾ ಸೀಜರ್ ಕಮಿಟಿಗೆ ವರದಿ ಸಲ್ಲಿಕೆ ಮಾಡಿಲಾಗಿದೆ ಎಂದು ತಿಳಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments