ಸುದ್ದಿ

ಬಿಸಿಲಿನ ಧಗೆಗೆ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ!

ಬಳ್ಳಾರಿ: ಬಿಸಿಲಿನ ಭಾರೀ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು ನಿರ್ಜಲೀಕರಣ, ಜ್ವರ ಮತ್ತು ವಾಂತಿಯಿಂದ ಬಳಲುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 40 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ತಾಪಮಾನ ಕಂಡುಬರುತ್ತಿದೆ. ಈ ವರ್ಷ ಗರಿಷ್ಠ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ.

ಹವಾಮಾನ ಇಲಾಖೆಯು ಕಳೆದ ವಾರ, ಬರದಿಂದಾಗಿ ತೀವ್ರ ಬಿಸಿಲ ಧಗೆ ಕಂಡುಬರುತ್ತಿರುವ ಬಳ್ಳಾರಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಾದ್ಯಂತ ಬಿಸಿಗಾಳಿಯ ಎಚ್ಚರಿಕೆ ನೀಡಿತ್ತು.

ತೀವ್ರ ತಾಪಮಾನ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ನಾಗರಿಕರು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ ಯಾವುದೇ ರಕ್ಷಣೆಯಿಲ್ಲದೆ ನೇರ ಸೂರ್ಯನ ಬೆಳಕಿಗೆ ಹೊರಬರದಂತೆ ಸೂಚಿಸಲಾಗಿದೆ.

Comments (0)

Your email address will not be published. Required fields are marked *

Back to top button