ಜನಸಾಮಾನ್ಯರ ದನಿಸುದ್ದಿ

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನೀರಿಗಾಗಿ ಹಾಹಾಕಾರ

ಬಳ್ಳಾರಿ : ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಡಿಯೋ ನೀರಿಗಾಗಿ ಆಹಾಕಾರ ಉಂಟಾಗಿದ್ದು, ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿರುವಂತಹ ಘಟನೆ ತಾಲೂಕು ಕುರುಗೋಡಿನ ದಮ್ಮೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

ಬೇಸಿಗೆ ಪ್ರಾರಂಭವಾದ ದಿನದಿಂದ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಖಾಸಗಿಯವರ ಬಳಿ ದುಡ್ಡುಕೊಟ್ಟು ನೀರು ಖರೀದಿ ಮಾಡಿಕೊಳ್ಳಬೇಕು. ಇಲ್ಲ ಅಂದ್ರೆ ಈ ಗ್ರಾಮಕ್ಕೆ ಕುಡಿಯಲು ನೀರೆ ಇಲ್ಲ. ನೀರಿಲ್ಲದೇ ಇರುವುದರಿಂದ ಗ್ರಾಮಸ್ಥರಿಗೆ ಬೇರೆ ಮಾರ್ಗವೇ ಇಲ್ಲ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಬೇಸಿಗೆ ಕುಡಿಯುವ ನೀರಿಗಾಗಿ ಮುನ್ನಚ್ಚೆರಿಕೆ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಅಕ್ರೋಶ ಹೊರ ಹಾಕಿದರು.

ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ ಆದರೆ ಸರಿಯಾದ ಉತ್ತರ ಕೊಡದೇ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಬಾಗಿಲು ಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿ ಸಿಬ್ಬಂಧಿಗಳ ಕಾರ್ಯ ವೈಖರಿಯನ್ನು ವಿರೋಧಿಸಿ ಸಾರ್ವಜನಿಕರು ಮುತ್ತಿಗೆ ಹಾಕಿದ್ದಾರೆ. ನೀರು ಕೊಡುವಂತೆ ಆಗ್ರಹಿಸಿ ಮಹಿಳೆಯರು ಗ್ರಾಮ ಪಂಚಾಯಿತಿ ಕಚೇರಿಯ ಮುಂದೆ ಖಾಲಿಕೊಡ ಹಿಡಿದು ಪ್ರತಿಭಟನೆಯನ್ನ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button