ಬೆಂಗಳೂರು: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ಕಾವು ಏರುತ್ತಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲೆಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್ ಪಣ ತೊಟ್ಟಿದ್ದಾರೆ.
ಈ ಮಧ್ಯೆ ಕಳೆದ 10 ವರ್ಷಗಳಿಂದ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಜಲ ಜೀವನ್ ಮೀಷನ್, ಜನೌಷಧಿ ಕೇಂದ್ರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಸ್ವಚ್ಛ ಭಾರತ್ ಮಿಷನ್ ಸೇರಿದಂತೆ ಇನ್ನಿತರ ಯೋಜನೆಯ ಸೌಲಭ್ಯಗಳ ಪಟ್ಟಿ ಬಿಡುಗಡೆ ಮಾಡಿದೆ. ಕೇಂದ್ರದ ಸರಕಾರದ ಜಲ ಜೀವನ್ ಮಿಷನ್ ಯೋಜನೆಯಿಂದ ರಾಜ್ಯಕ್ಕೆ 2019 ರಿಂದ 2023 ರ ವರೆಗೆ ಒಟ್ಟು 47,32,183 ನಲ್ಲಿಗಳಿಗೆ ಕುಡಿವ ನೀರಿನ ಸಂಪರ್ಕ ಕಲ್ಪಿಸಲಾಗಿದೆ.
ರಿಯಾಯಿತಿ ದರದಲ್ಲಿ ಜೀವ ರಕ್ಷಕ ಔಷಧಿಗಳನ್ನು ನೀಡುವ 1120 ಜನೌಷಧಿ ಕೇಂದ್ರಗಳನ್ನು ಬಿಜೆಪಿ ಸರಕಾರದ ಅವಧಿಯಲ್ಲಿ ತೆರೆಯಲಾಗಿದೆ. ಬಯಲು ಶೌಚ ಮುಕ್ತ ದೇವನ್ನಾಗಿ ಮಾಡುವ ನಿಟ್ಟಿನಲ್ಲಿ ಸ್ವಚ್ಛ ಭಾರತ್ ಮಿಷನ್ನಿಂದ 48,47,027(2014-2023) ಶೌಚಾಲಯಗಳನ್ನು ಕಟ್ಟಲಾಗಿದೆ. ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಲ್ಲಿ ರಾಜ್ಯದ 8,57,709 ಫಲಾನುಭವಿಗಳಿಗೆ ಉಚಿತ ಅಡುಗೆ ಸಿಲಿಂಡರ್ ವ್ಯವಸ್ಥೆ ಕಲ್ಪಿಸಿದೆ.