ರಾಜಕೀಯಸುದ್ದಿ

ಲೋಕ ಸಮರಕ್ಕೆ ಸಜ್ಜಾದ ಹೆಚ್​ಡಿಕೆ!

ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬೆಂಗಳೂರಿಗೆ ಮರಳಿರುವ ಮಾಜಿ ಮುಖ್ಯಮಂತ್ರಿ H.D.ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿದ್ದು, HD ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದರು. ಜೊತೆಗೆ ಚನ್ನಪಟ್ಟಣ ಕ್ಷೇತ್ರದ ಅನೇಕ ಪ್ರಮುಖ ಮುಖಂಡರು ಉಪಸ್ಥಿತರಿದ್ರು.

ಹೆಚ್ಚು ಮಾತನಾಡಬಾರದು, ಆಯಾಸ ಮಾಡಿಕೊಳ್ಳಬಾರದು ಎಂದು ವೈದ್ಯರು ನೀಡಿರುವ ಕಟ್ಟುನಿಟ್ಟಿನ ಸೂಚನೆಯನ್ನೂ ಲೆಕ್ಕಿಸದೆ ಪಕ್ಷ ಸಂಘಟನೆಗಾಗಿ ದಳಪತಿ ಫುಲ್​ ಆ್ಯಕ್ಟೀವ್​ ಆಗಿದ್ದಾರೆ. ಈಗಾಗಲೇ ಚುನಾವಣಾ ಕಣ ರಂಗೆರಿದ್ದು, ಲೋಕ ಅಖಾಡಕ್ಕೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಹೀಗಾಗಿ HDK ಕೂಡ ಲೋಕ ಸಮಕ್ಕೆ ತಯಾರಿ ಮಾಡಿಕೊಳ್ತಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಶ್ರೀ ಬಿ.ಶ್ರೀರಾಮುಲು ಹಾಗೂ ಶಾಸಕ ಚಂದ್ರಪ್ಪ ಅವರು ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಶ್ರೀ HD ಕುಮಾರಸ್ವಾಮಿ ಅವರ ನಿವಾಸಕ್ಕೆ ಸೌಹಾರ್ಧ ಭೇಟಿ ನೀಡಿ ಚರ್ಚೆ ನಡೆಸಿದರು.

 

Comments (0)

Your email address will not be published. Required fields are marked *

Back to top button