
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಡ್ಯಾನಿಯಲ್ ಬಾಲಾಜಿ ನಿಧನರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ವಿಲನ್ ಆಗಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಡ್ಯಾನಿಯಲ್ ಬಾಲಾಜಿಗೆ 48 ವರ್ಷ. ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬದ ಸದಸ್ಯರು ಹೌದು. ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿದ್ದಾರೆ. ಕಿರಾತಕ, ಶಿವಾಜಿನಗರ, ಬೆಂಗಳೂರು ಅಂಡರ್ವಲ್ಡ್, ಡವ್ ಸಿನಿಮಾಗಳಲ್ಲಿ ನಟಿಸಿದ್ದು, ಒಳ್ಳೆ ಹೆಸರು ಮಾಡಿದ್ದರು.




