Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಕುಮಾರ್​ ಬಂಗಾರಪ್ಪ ಮನೆಗೆ ನಟ ಶಿವರಾಜಕುಮಾರ್​ ಬೆಂಬಲಿಗರಿಂದ ಮುತ್ತಿಗೆ

ಕುಮಾರ್​ ಬಂಗಾರಪ್ಪ ಮನೆಗೆ ನಟ ಶಿವರಾಜಕುಮಾರ್​ ಬೆಂಬಲಿಗರಿಂದ ಮುತ್ತಿಗೆ

ಬೆಂಗಳೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ಅವರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ಮನೆಗೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿಯಿಂದ ಸಂಸದ ಬಿವೈ ರಾಘವೇಂದ್ರ, ಕಾಂಗ್ರೆಸ್​ನಿಂದ ನಟ ಶಿವರಾಜಕುಮಾರ್​ ಪತ್ನಿ ಗೀತಾ ಶಿವರಾಜಕುಮಾರ್​ ಮತ್ತು ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಸ್ಪರ್ಧಿಸಿದ್ದರು.

ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಬಿವೈ ರಾಘವೇಂದ್ರ ಗೆಲುವಿನ ಬಳಿಕ, ಬಿಜೆಪಿ ನಾಯಕ ಕುಮಾರ್​ ಬಂಗಾರಪ್ಪ ನಟ ಶಿವರಾಜಕುಮಾರ್​ ಅವರ ಬಗ್ಗೆ ಲಘುವಾಗಿ ಬರೆದು ಫೇಸ್​ಬುಕ್​​ನಲ್ಲಿ ಪೋಸ್ಟ್​​ ಹಾಕಿದ್ದು, ಶಿವಣ್ಣ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.08) ನಟ ಶಿವರಾಜಕುಮಾರ್ ಬೆಂಬಲಿಗರು ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್​ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ್ದಾರೆ.
Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments