ಬೆಂಗಳೂರು : ಭ್ರಷ್ಟ ಅಧಿಕಾರಿಗಳು ಎಂದೂ ನಿರೀಕ್ಷೆ ಮಾಡಿರದ ರೇಡ್ ನಡೆದಿದ್ದು. ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ರಾಜ್ಯದ ಹಲವಡೆ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಲೊಕಾಯುಕ್ತ ಅಧಿಕಾರಿಗಳು ಉತ್ತರ ಕನ್ನಡ, ಬೀದರ್, ರಾಮನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿವೆ. ಉತ್ತರ ಕನ್ನಡ ನಗರಾಭಿವೃದ್ಧಿ ಪ್ರಾಧಿಕಾರದ ಎಇಇ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೀದರ್ ನ ಕಾರಂಜಾ ವಿಭಾಗದ ಇಇ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರದಲ್ಲೂ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪಿಡಿಒ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾ ದಾಳಿಗೆ ತಬ್ಬಿಬ್ಬಾದ ಅಧಿಕಾರಿಗಳ ಮನೆಯಲ್ಲಿ ತೀವ್ರ ಪರಿಶೀಲನೆ ನಡೆಸಲಾಗುತ್ತಿದ್ದು, ಇಂಚಿಂಚು ಶೋಧ ನಡೆಯುತ್ತಿದೆ.