ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಇನ್ನುಳಿದ ಕ್ಷೇತ್ರಗಳಲ್ಲಿ ಯಾರೆಲ್ಲಾ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ವಿವರ ಇಲ್ಲಿದೆ.
ಜೆಡಿಎಸ್(JDS) ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಮಲ್ಲೇಶ್ ಬಾಬುಗೆ ನೀಡಲಾಗಿದೆ. ಇನ್ನು ತೀವ್ರ ಕುತೂಲಕ್ಕೆ ಕಾರಣವಾಗಿದ್ದ ಮಂಡ್ಯ ಕ್ಷೇತ್ರದಿಂದ ಹೆಚ್. ಡಿ. ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ.