ಬೆಂಗಳೂರು : ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೋಣನ ಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈರೇಶ್ (25) ಮೃತ ದುರ್ದೈವಿಯಾಗಿದ್ದಾರೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಈರೇಶ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ನಿನ್ನೆ ಶನಿವಾರ ಮಧ್ಯರಾತ್ರಿ ನಿದ್ದೆಗೆ ಜಾರಿದ್ದ ಈರೇಶ್ ಮೇಲೆ ಯಾರೋ ಹಂತಕರು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೋಣನಕುಂಟೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.