ಬೆಂಗಳೂರು : ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಪಾರ್ಟಿಯಲ್ಲಿ ಕೆಲ ಮಾಡೆಲ್ ಗಳು, ಟೆಕ್ಕಿಗಳು, ತೆಲುಗು ನಟಿಯರು ಭಾಗಿಯಾಗಿದ್ದರು ಎಂದು ಗೊತ್ತಾಗಿದೆ.

ಕಾನ್ ಕಾರ್ಡ್ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಬರ್ತಡೇ ಪಾರ್ಟಿ ಹೆಸರಿನಲ್ಲಿ ನಡೆಯುತ್ತಿದ್ದ ಈ ಪಾರ್ಟಿ ತಡರಾತ್ರಿ 2 ಗಂಟೆಯಾದ್ರೂ ಮುಗಿದಿರಲಿಲ್ಲ. ಅವಧಿ ಮೀರಿ ಪಾರ್ಟಿ ಮಾಡಲಾಗುತ್ತಿರುವ ಸುದ್ದಿ ತಿಳಿದ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದಾಗ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.

ಬೆಂಜ್ ಕಾರಿನಲ್ಲಿ ಆಂಧ್ರ ಶಾಸಕನ ಪಾಸ್ ಪತ್ತೆಯಾಗಿದೆ. ಎಂಎಲ್​ಎ ಕಾಕನಿ ಗೋವರ್ಧನರೆಡ್ಡಿ ಹೆಸರಿನ ಪಾಸ್ ಸಿಕ್ಕಿದೆ. ಜೊತೆಗೆ ದಾಳಿ ನಡೆದ ಫಾರ್ಮ್​​​ಹೌಸ್ ಬಳಿ ಮರ್ಸಿಡಿಸ್-ಬೆನ್ಜ್, ಜಾಗ್ವಾರ್, ಆಡಿ ಕಾರ್ ಸೇರಿದಂತೆ 15ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಪತ್ತೆಯಾಗಿವೆ. ಪಾರ್ಟಿಯಲ್ಲಿ ಮಾಡೆಲ್​​ಗಳು, ಟೆಕ್ಕಿಗಳು ತೆಲುಗು ನಟಿಯರು ಸೇರಿದಂತೆ ಅನೇಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ಗುರುತು ಪತ್ತೆ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್​​ಸಿಟಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.

By Veeresh

Leave a Reply

Your email address will not be published. Required fields are marked *

Verified by MonsterInsights