ಎಲ್ಲಿ ನೋಡಿದ್ರು ಐಪಿಎಲ್ ನದ್ದೆ ಹವಾ. ಸಧ್ಯ ಇಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲ್ಲಿದ್ದೂ, ಪಂದ್ಯಾವಳಿಯ ನಿಮಿತ್ತ ಸುಗಮ ಸಂಚಾರಕ್ಕಾಗಿ ನಗರ ಸಂಚಾರಿ ಪೊಲೀಸರು ಕೆಲವು ಬದಲಾವಣೆಗಳನ್ನು ಮಾಡಿ ಸೂಕ್ತ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಗಲಾಟೆ ಮತ್ತು ಟ್ರಾಫಿಕ್ ಜಾಮ್ ತಪ್ಪಿಸುವ ಸಲುವಾಗಿ ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
ನಿಲುಗಡೆ ಸ್ಥಳಗಳು:
ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯು.ಬಿ. ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ (ಕಬ್ಬನ್‍ಪಾರ್ಕ್ ಒಳಭಾಗ)ಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.


