ಕ್ರೈಂ ಸ್ಟೋರಿರಾಜ್ಯ

ಗೋಡೆ ಮೇಲೆ ಡೆತ್​ನೋಟ್​​ ಬರೆದು ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‌ನೋಟ್ ಬರೆದಿಟ್ಟು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಕಲ್ ಅನ್ಸರ್ ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.ಗೋವಿಂದಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ. 7 ವರ್ಷಗಳ ಹಿಂದೆ ಅಕ್ಕಲ್ ಅನ್ಸರ್‌ಗೆ ವಿವಾಹವಾಗಿತ್ತು.

ಮಕ್ಕಳಾದ ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು, ಗೋಡೆಯ ಮೇಲೆ ತನ್ನ ಸಾವಿಗೆ ಕಾರಣರಾದವರ ಹೆಸರುಗಳನ್ನ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ.

ಮಾ.11 ರಂದು ಅಕ್ಕಲ್ ಅನ್ಸರನ್ನು ಮನೆಗೆ ಕರೆಸಿಕೊಂಡು ಪತ್ನಿ ಹಾಗೂ ಪತ್ನಿ ಕುಟುಂಬಸ್ಥರು ಹಲ್ಲೆ ಮಾಡಿದ್ದರು. ಇದರಿಂದ ಮನನೊಂದು ಅಕ್ಕಲ್ ಅನ್ಸರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಸಹೋದರ ಆರೋಪಿಸಿದ್ದಾನೆ. ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ.

Comments (0)

Your email address will not be published. Required fields are marked *

Back to top button