ಬೆಂಗಳೂರು : ಒಂದೇ ಕುಟುಂಬದ ಮೂರು ಜನರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ ನಗರದ ಮೂರನೆ ಹಂತದಲ್ಲಿ ನಡೆದಿದೆ.
ಇವರು ಮೂಲತಃ ಉಡುಪಿ ಜಿಲ್ಲೆಯವರಾಗಿದ್ದು, ಬೆಂಗಳೂರಿನಲ್ಲಿ ಸುಮಾರು ಹತ್ತು ವರ್ಷಗಳಿಂದ ವಾಸವಾಗಿದ್ದಾರೆ. ಇವರು ಡೈ ಫ್ಯಾಕ್ಟರಿಯನ್ನ ನಡೆಸುತ್ತಿದ್ದು, ಸಾಲದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಮನೆಯಲ್ಲಿ ತಾಯಿ ಹಾಗು ಇಬ್ಬರು ಮಕ್ಕಳು ಸಾವನ್ನಪ್ಪಿರುವುದು ತಿಳಿದು ಬಂದಿದೆ. ಸುಖನ್ಯ(48), ನಿಖಿತ್(28), ನಿಶಿತ್(28) ಈ ಮೂವರು ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಜೆಪಿ ನಗರ ಪೊಲೀಸರು ಭೇಟಿ ಪರಿಶೀಲನೆಯನ್ನ ನಡೆಸಿದ್ದಾರೆ. ಸದ್ಯ ಸ್ಥಳೀಯರಿಂದ ಹಾಗು ಸಂಬಂಧಿಕರಿಂದ ಪೊಲೀಸರು ಮಾಹಿತಿಯನ್ನ ಪಡೆಯುತ್ತಿದ್ದಾರೆ.