Thursday, May 1, 2025
28.8 C
Bengaluru
LIVE
ಮನೆಸುದ್ದಿಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವಪತ್ತೆ!

ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವಪತ್ತೆ!

ಬೆಳಗಾವಿ : ಅನುಮಾಸ್ಪದ ವ್ಯಕ್ತಿಯ ಶವ ಬೆಳಗಾವಿ ನಗರದ ಕ್ಯಾಂಪ್‌ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಪತ್ತೆಯಾಗಿದೆ.

ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 40-45ವರ್ಷದ ವ್ಯಕ್ತಿಯ ಮೃತದೇಹವೆಂದು ಪತ್ತೆಹಚ್ಚಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆಯೇ ಸಾವನ್ನಪ್ಪಿದ ಶಂಕೆ ಕಂಡುಬಂದಿದೆ. ಸ್ಥಳಕ್ಕೆ ಕ್ಯಾಂಪ್‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಯೋ ಅಥವಾ ಅಸಹಜ ಸಾವೋ ಎಂಬುವುದರ ಬಗ್ಗೆ ಪೊಲೀಸರ ತನಿಖೆ ನಡೆಸಲು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಕ್ಯಾಂಪ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments