ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ‘ಡೆವಿಲ್’ ಸಿನಿಮಾ ಚಿತ್ರೀಕರಣದ ವೇಳೆ ಎಡಗೈಗೆ ಪೆಟ್ಟಾಗಿತ್ತು. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಕೈಗೆ ಸರ್ಜರಿ ಮಾಡಲಾಗಿದೆ ಎಂದು ವರದಿಯಾಗಿದೆ. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಮಂಡ್ಯದಲ್ಲಿ ನಡೆದ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ದರ್ಶನ್ ಕೂಡ ಭಾಗಿಯಾಗಿದ್ದರು. ಈ ವೇಳೆ ನಟ ಆಪರೇಷನ್ ಮಾಡಿಸಿಕೊಳ್ಳಲಿದ್ದೇನೆ ಎಂದು ಹೇಳಿಕೊಂಡಿದ್ದರು. ಬಹಿರಂಗ ಸಭೆ ಅಲ್ಲದೇ ‘ಮ್ಯಾಟ್ನಿ’ ಸಿನಿಮಾ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ದರ್ಶನ್ ಹಾಜರಾಗಿದ್ದರು. ಮಂಡ್ಯ ಸಭೆ ಬಳಿಕ ಬೆಂಗಳೂರಿನಲ್ಲಿ ನಡೆದ ‘ಜಾಜಿ’ ಆಲ್ಬಮ್ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ದರ್ಶನ್ ಭಾಗಿ ಆಗಿದ್ದರು.
ಮಂಡ್ಯದ ಬಹಿರಂಗ ಸಭೆಯಲ್ಲಿ ದರ್ಶನ್ ಅವರು ಈ ಬಗ್ಗೆ ಮಾತನಾಡಿದ್ದರು. ʻʻನಾನು ಕಳೆದ ಬಾರಿ ಬಂದಾಗ ಬಲಗೈ ಮುರಿದಿತ್ತು, ಈಗ ಎಡಗೈ. 2ರಂದು ಆಪರೇಷನ್ ಇತ್ತು. ಇಂದೇ ರಾತ್ರಿ ಆಸ್ಪತ್ರೆಗೆ ದಾಖಲಾಗಿ, ನಾಳೆ ಬೆಳಗ್ಗೆ ಆಪರೇಷನ್ ಮಾಡಿಸಿಕೊಳ್ಳುತ್ತೇನೆ. ಅದಕ್ಕೆ ದಯವಿಟ್ಟು ನಾನು ಹೋಗಬೇಕಾದರೆ, ಸ್ವಲ್ಪ ಜಾಗ ಮಾಡಿಕೊಡಿʼʼ ಎಂದು