ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯದ ಕೆಂಕೆರೆ ಕೆರೆ ಬಳಿ ಕಾಡಾನೆಯೊಂದು ಸಾವನ್ನಪ್ಪಿದೆ.
ಸ್ಥಳಕ್ಕೆ ಭೇಟಿ ನೀಡಿ ಪರೀಕ್ಷಿಸಿದ ಅರಣ್ಯಾಧಿಕಾರಿಗಳು ಮೃತಪಟ್ಟಿರುವುದು ಹೆಣ್ಣಾನೆ. ಸ್ವಾಭಾವಿಕವಾಗಿ ಆನೆ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರವಷ್ಟೇ ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ದೇಹಳ್ಳಿ ಸಮೀಪದ ಕಟ್ಟಿಗೆ ಇಡ್ಡೆಮನೆ ತೋಟಕ್ಕೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಕ್ಕೊಳಗಾಗಿ ಮೃತಪಟ್ಟಿತ್ತು.