ಚಿತ್ರದುರ್ಗ : ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದ ಹಿನ್ನೆಲೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಖಾಲಿ ಕೊಡ ತಲೆಯ ಮೇಲೆ ಹೊತ್ತು ಆಕ್ರೋಶ ಹೊರಹಾಕಿದ್ದಾರೆ.
ಹೊಳಲ್ಕೆರೆ ತಾಲೂಕಿನ ವಿಶ್ವನಾಥನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಾಪುರ ಗ್ರಾಮಸ್ಥರು ಕಳೆದ ನಾಲ್ಕು ದಿನಗಳಿಂದ ಕುಡಿಯುವ ನೀರು ಬಿಟ್ಟಲ್ಲ. ಈ ಬೇಸಿಗೆ ಸಂದರ್ಭದಲ್ಲಿ ಗ್ರಾಮದಲ್ಲಿ ಜನ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿವೆ. ಆದರೆ ಗ್ರಾಮ ಪಂಚಾಯಿತಿಯವರು ಸಮರ್ಪಕ ನೀರು ಕೊಡುವಲ್ಲಿ ವಿಫಲರಾಗಿದ್ದಾರೆ ಅಂತಾ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ರು.
ಸುಡು ಬಿಸಿಲನ್ನೂ ಲೆಕ್ಕಿಸದೇ ಗ್ರಾಮದ ಮಹಿಳೆಯರು ತಲೆಯ ಮೇಲೆ ಕೊಡ ಹೊತ್ತು ನೀರಿಗಾಗಿ ಆಗ್ರಹಿಸಿದ್ರು. ಪಿಡಿಓ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ನೀರು ಕೇಳಿದ್ರೆ ಉಡಾಫೆ ಉತ್ತರ ಕೊಡ್ತಾರೆ. ಶಾಸಕರ ಗಮನಕ್ಕೆ ತಂದ್ರೂ ನಮಗೆ ನೀರು ಸಿಗುತ್ತಿಲ್ಲ ಅಂತಾ ಆಕ್ರೋಶ ಹೊರಹಾಕಿದ್ದಾರೆ.