ನವದೆಹಲಿ : ಮೂವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ಗಳಿಗೆ ವರ್ಗಾವಣೆ ಮಾಡಲಾಗಿದೆ. ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಖಾಯಂ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ.
ಕಾನೂನು ಸಚಿವಾಲಯದ ಅಧಿಸೂಚನೆಗಳ ಪ್ರಕಾರ ಮಧ್ಯಪ್ರದೇಶ ಹೈಕೋರ್ಟಿನ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ಕೋಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಅವರನ್ನು ತೆಲಂಗಾಣ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ. ಅದೇ ರೀತಿ ಕೇರಳ ಹೈಕೋರ್ಟ್ನ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನು ಕರ್ನಾಟಕ ಹೈಕೋರ್ಟ್ಗೆ ನಿಯೋಜಿಸಲಾಗಿದೆ.
ಅಲಹಾಬಾದ್ ಹೈಕೋರ್ಟಿನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ ಖಾಯಂ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ. ಅವರಲ್ಲಿ ನ್ಯಾಯಮೂರ್ತಿಗಳಾದ ಸೌರಭ್ ಶ್ರೀವಾಸ್ತವ್, ಓಂ ಪ್ರಕಾಶ್ ಶಿಕ್ಲಾ, ಮೊಹಮ್ಮದ್ ಅಜರ್ ಹುಸೇನ್ ಇದ್ರಿಸಿ, ಜ್ಯೋತ್ಸ್ನಾ ಶರ್ಮಾ ಮತ್ತು ಸುರೇಂದ್ರ ಸಿಂಗ್ ಸೇರಿದ್ದಾರೆ.