ಧಾರವಾಡ : ಗ್ಯಾರಂಟಿಗಳ ಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯನವರು, ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿದ್ದಾರೆ. ಅಲ್ಲದೆ ಅಧಿಕಾರಕ್ಕೆ ಬಂದ್ಮೇಲೆ ಇದುವರೆಗೂ ಒಂದೇ ಒಂದು ರಸ್ತೆಗೆ ಬುಟ್ಟಿ ಮಣ್ಣು ಕೂಡಾ ಹಾಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ಧಾರವಾಡ ಲೋಕಸಭಾ ವ್ಯಾಪ್ತಿಯ ಕಾಲಘಟಗಿ ವಿಧಾನ ಸಭಾ ಕ್ಷೇತ್ರದ ನಿಗದಿ ಗ್ರಾಮದಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಾತ್ತೇದ್ರೇ ಬರಿ ಗ್ಯಾರಂಟಿ ಗ್ಯಾರಂಟಿ ಜಪ ಮಾಡುತ್ತಿದೆ. ಆದರೆ ರಾಜ್ಯದಲ್ಲಿ ಅಭಿವೃದ್ಧಿಯನ್ನು ಮರೆತು ಬಿಟ್ಟಿದೆ. ಅಲ್ಲದೆ ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಆಡಳಿತವಧಿಯಲ್ಲಿ ರೈತರಿಗೆ ನೀಡುತ್ತಿದ್ದ 4000 ರು. ಕಿಸಾನ್ ಸುಮ್ಮಾನ್ ನಿಧಿಯನ್ನು ಈ ಕಾಂಗ್ರೆಸ್ ಸರ್ಕಾರ ಬಂದ್ ಮಾಡಿದೆ ಎಮದು ಹೇಳಿದರು.
ರೈತರಿಗೆ ಸಹಾಯವಾಗಲಿ ಎಂದು ನಮ್ಮ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ 4000 ರು. ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದ್ದರು. ಈ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿ ಈಗ ಸ್ಥಗಿತಗೊಳಿಸಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನಿ ಮೋದಿ ಅವರು ಘೋಷಿಸಿದಂತೆ. ಇವತ್ತಿಗೂ 6000 ರು. ಕಿಸಾನ್ ಸಮ್ಮಾನ್ ನಿಧಿಯನ್ನು ನೇರ ರೈತರ ಖಾತೆಗೆ ಹಾಕುತ್ತಿದೆ. ಆದರೆ, ರಾಜ್ಯ ಸರ್ಕಾರ ಅದನ್ನು ನಿಲ್ಲಿಸಿ ಬಿಟ್ಟಿದೆ. ರೈತರ ಮೇಲೆ ನಿಜಕ್ಕೂ ಇವರಿಗೆ ಕಾಳಜಿಯೇ ಇಲ್ಲ ಎಂದು ಕುಟುಕಿದರು.
ಜೊತೆಗೆ ರಾಮಮಂದಿರದ ವಿಚಾರ ತೆಗೆದು ಜೋಶಿಯವರು, ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಮಾರಂಭವನ್ನು ಬೈಕಟ್ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಡಿ. ಇದೇ ಕಾಂಗ್ರೆಸ್ ಪಕ್ಷ ಸರ್ಜಿಕಲ್ ಸ್ಟ್ರೈಕ್ ಗೆ, ರಾಮ ಜನ್ಮ ಸ್ಥಳಕ್ಕೆ ಸಾಕ್ಷಿ ಕೇಳಿತ್ತು. ಇಂಥ ಪಕ್ಷಕ್ಕೆ ನೀವು ಬೆಂಬಲ ನೀಡಬೇಕೇ? ಎಂದು ಮಾರ್ಮಿಕವಾಗಿ ಹೇಳಿದರು.