ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸೂಲುಕುಂಟೆ ಗ್ರಾಮದಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಸಮೀಪದ ಸೂಲುಕುಂಟೆ ಗ್ರಾಮದ ಜನರ ನಿದ್ದೆಗೆಡಿಸಿದ್ದ ಈ ಚಿರತೆ ಎರಡು ದಿನಗಳ ಹಿಂದೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇತ್ತೀಚೆಗಷ್ಟೇ ಗ್ರಾಮದಲ್ಲಿನ ಸಾಕುನಾಯಿಯ ಮೇಲೆ ದಾಳಿ ನಡೆಸಿತ್ತು. ಅಲ್ಲದೆ ಫೆಬ್ರವರಿ 16 ರಂದು ಮತ್ತೊಂದು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿತ್ತು. ಇದೀಗ ಸುಮಾರು ಎರಡು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ.