ಬಾಗಲಕೋಟೆ : ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬಸ್ ಹಿಂಭಾಗಕ್ಕೆ ಕ್ರೂಸರ್ ರಭಸವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟರೆ, ಐವರು ಗಂಭೀರ ಗಾಯಗೊಂಡಿದ್ದಾರೆ. ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ವೊಲ್ವೊ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಕನಮಡಿ ಗ್ರಾಮದ ಅನುಸೂಯಾ ಮೋರೆ (56), ಲೋಕಾಪುರ ಗ್ರಾಮದ ನಿವೇದಿತಾ (17) ರೆಹಮತ್ ಪುರದ ಭಾಗ್ಯಶ್ರೀ ಅಂಬೇಕರ್ (18) ಹಾಗೂ ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (19) ಎಂದು ಗುರುತಿಸಲಾಗಿದೆ. ಇಂದು ಶಿವಾನಿ ಅಂಬೇಕರ್ ಮದುವೆಯಿತ್ತು. ಹೀಗಾಗಿ ಬುಧವಾರ ಅರಿಶಿಣ ಶಾಸ್ತ್ರ ಕಾರ್ಯಕ್ಕೆ ಇವರೆಲ್ಲ ಹೊರಟಿದ್ದರು.