ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.
ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅತಿಥಿಯಾಗಿ ಹೋಗಿದ್ದರು. “ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದರಿಂದಲೇ ಆರ್‌ಸಿಬಿ ಪದೇ ಪದೆ ಸೋಲುತ್ತಿದೆ” ಎಂದು ಗಜಪಡೆ ಟ್ವಿಟರ್ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಸದ್ಯ ಆರ್‌ಸಿಬಿ ತಂಡ ಪ್ಲೇ ಆಫ್‌ಗೆ ಹೋಗುವುದು ಖಚಿತವಾಗುತ್ತಿದ್ದಂತೆ ಹಲವರು ಅವಹೇಳನಕಾರಿ ಪೋಸ್ಟ್ ನೆನಪಿಸಿ ತಿರುಗೇಟು ನೀಡುತ್ತಿದ್ದಾರೆ.
ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್‌ಸಿಬಿ ಸೋಲುತ್ತಿದೆ ಎಂದು ‘ಗಜಪಡೆ’ ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್‌ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್ ರಾಜ್ಕುಮಾರ್ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್ ಕಾನೂನು ಕ್ರಮ ಮುಂದಾಗಿದ್ದರು.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ʻʻಬೇರೆ ಆಯ್ಕೆ ಇಲ್ಲ.. ಜೀವನ ಅಂದುಕೊಂಡಷ್ಟು ಸುಲಭವಿಲ್ಲ, ಜೀವನ ಹೇಗೋ ನಡೆದುಕೊಂಡು ಹೋಗುತ್ತಿದೆ. ಕಷ್ಟ ಇದ್ದರೂ ಎಲ್ಲವನ್ನು ಸ್ವೀಕರಿಸಬೇಕುʼʼಎಂದು ಹೇಳಿದ್ದರು.