ಸುದ್ದಿ

ಬುರ್ಖಾ ಧರಿಸಿ ಸಿಸಿಬಿ ಮುಂದೆ ಹಾಜರಾದ ನಟಿ ಹೇಮಾ ಅರೆಸ್ಟ್‌

ಬೆಂಗಳೂರು: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದ ಆರೋಪದ ಮೇಲೆ ತೆಲಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟೀವ್ ಬಂದಿತ್ತು.

ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಅನಾರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗದೇ ಸಮಯಾವಕಾಶ ಕೇಳಿದ್ದರು. ಹಾಜರಾಗದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು 2ನೇ ನೋಟಿಸ್ ಕೂಡ ನೀಡಿದ್ದರು. ಇಂದು ಸಂಜೆ 4 ಗಂಟೆಗೆ ಬೆಂಗಳೂರಿಗೆ ಆಗಮಿಸಿರುವ ಅವರು ಬುರ್ಖಾ ತೊಟ್ಟು ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಈ ವೇಳೆ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಅವರು ಸಮರ್ಪಕ ಉತ್ತರ ನೀಡಿಲ್ಲ. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ಮೆಡಿಕಲ್ ಟೆಸ್ಟ್‌ಗಾಗಿ ಪೊಲೀಸರು ಕರೆದೊಯ್ದಿದ್ದಾರೆ. ಮಂಗಳವಾರ ಬೆಳಗ್ಗೆ ಆನೇಕಲ್‌ನಲ್ಲಿರುವ ನ್ಯಾಯಾಲಯದ ಮುಂದೆ ನಟಿಯನ್ನು ಹಾಜರುಪಡಿಸಲಿದ್ದಾರೆ.

Comments (0)

Your email address will not be published. Required fields are marked *

Back to top button