ಬೆಂಗಳೂರು : ಟಿ20 ವಿಶ್ವಕಪ್ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಭಾನುವಾರದಿಂದ (ಜೂ.2) ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ ಒಂದಷ್ಟು ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಗುವುದು ಖಚಿತ.
ಏಕೆಂದರೆ ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಕೊಹ್ಲಿ 15 ಪಂದ್ಯಗಳಿಂದ ಕಲೆಹಾಕಿರುವುದು ಬರೋಬ್ಬರಿ 741 ರನ್ಗಳು. ಇದೀಗ ಭರ್ಜರಿ ಫಾರ್ಮ್ನಲ್ಲಿರುವ ಕೊಹ್ಲಿ ಕಡೆಯಿಂದ ಅಮೋಘ ಇನಿಂಗ್ಸ್ಗಳನ್ನು ನಿರೀಕ್ಷಿಸಬಹುದು.

ಟೀಮ್ ಇಂಡಿಯಾ ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲಿ ಟೀಮ್ 4 ಪಂದ್ಯಗಳನ್ನಾಡಲಿದೆ. ಹಾಗೆಯೇ ದ್ವಿತೀಯ ಸುತ್ತಿಗೆ ಪ್ರವೇಶಿಸಿದರೆ 3 ಪಂದ್ಯಗಳನ್ನಾಡಲಿದ್ದಾರೆ. ಇನ್ನು ಸೆಮಿಫೈನಲ್ ಮತ್ತು ಫೈನಲ್ ಆಡಿದ್ರೆ ಒಟ್ಟು 9 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಬಹುದು.
ಅದರಂತೆ ಈ 9 ಪಂದ್ಯಗಳ ಮೂಲಕ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸುವ ನಿರೀಕ್ಷೆಯಿದೆ. ಈ ನಿರೀಕ್ಷೆಯೊಂದಿಗೆ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ಹೆಸರಿಗೆ ದಾಖಲಾಗಲಿರುವ ವಿಶ್ವ ದಾಖಲೆಗಳು ಯಾವುವು ಎಂದು ನೋಡುವುದಾದರೆ…
ಫೋರ್ಗಳ ದಾಖಲೆ: ಲೀಗ್ ಹಂತದ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 9 ಫೋರ್ಗಳನ್ನು ಬಾರಿಸಿದರೆ, ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಫೋರ್ ಸಿಡಿಸಿದ ವಿಶ್ವ ದಾಖಲೆ ಕೊಹ್ಲಿ ಪಾಲಾಗಲಿದೆ. ಸದ್ಯ ಈ ದಾಖಲೆ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ (111) ಅಗ್ರಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ (103) ದ್ವಿತೀಯ ಸ್ಥಾನದಲ್ಲಿದ್ದಾರೆ.
ರನ್ಗಳ ದಾಖಲೆ: ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಇರುವುದು ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2014 ರಲ್ಲಿ 4 ಅರ್ಧಶತಕಗಳೊಂದಿಗೆ ಕೊಹ್ಲಿ 319 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಭರ್ಜರಿ ಫಾರ್ಮ್ನಲ್ಲಿರುವ ಕೊಹ್ಲಿ ಈ ದಾಖಲೆ ಮುರಿಯುವುದನ್ನು ಎದುರು ನೋಡಬಹುದು.
ರನ್ ಸರದಾರ: ಟಿ20 ವಿಶ್ವಕಪ್ ಇತಿಹಾಸದಲ್ಲೇ 1500 ರನ್ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಳ್ಳಲು ಕಿಂಗ್ ಕೊಹ್ಲಿಗೆ ಬೇಕಿರುವುದು ಕೇವಲ 359 ರನ್ಗಳು ಮಾತ್ರ. ಹೀಗಾಗಿ ಈ ಬಾರಿಯ ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್ನಿಂದ ಮತ್ತೊಂದು ಮೈಲುಗಲ್ಲು ಸೃಷ್ಟಿಯಾದರೂ ಅಚ್ಚರಿಪಡಬೇಕಿಲ್ಲ.
Post Views: 1,539
- adminhttps://freedomtvlive.com/author/admin/
- adminhttps://freedomtvlive.com/author/admin/
- adminhttps://freedomtvlive.com/author/admin/
- adminhttps://freedomtvlive.com/author/admin/