ಬೆಂಗಳೂರು : ನಟ ದರ್ಶನ್ ನಟನೆಯ ಡೆವಿಲ್​ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಫಸ್ಟ್ ಲುಕ್ ಟೀಸರ್ ವೈರಲ್ ಆಗಿತ್ತು. ಈಗ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡಲಾಗಿದೆ. ಇದನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ. ಈ ವಿಡಿಯೋ ಗಮನ ಸೆಳೆಯುತ್ತಿದೆ.

‘ಡೆವಿಲ್’ ಚಿತ್ರಕ್ಕೆ ಪ್ರಕಾಶ್ ವೀರ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅವರಿಗೆ ಸಿನಿಮಾ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಇದೆ. ‘ವಂಶಿ’, ‘ಮಿಲನ’ ಮೊದಲಾದ ಸಿನಿಮಾಗಳಿಗೆ ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡಿದ್ದರು. ದರ್ಶನ್ ಅವರ ಜೊತೆ ಈ ಮೊದಲು ‘ತಾರಕ್’ ಸಿನಿಮಾ ಮಾಡಿದ್ದರು. ಈ ಚಿತ್ರ 2017ರಲ್ಲಿ ರಿಲೀಸ್ ಆಗಿತ್ತು. ಇವರು ಎರಡನೇ ಬಾರಿಗೆ ಒಂದಾಗಿದ್ದಾರೆ.

 

 

 

By Veeresh

Leave a Reply

Your email address will not be published. Required fields are marked *

Verified by MonsterInsights