ಸುದ್ದಿ
ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು

ಮಂಡ್ಯ: ಕಾವೇರಿ ನದಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿದೆ. ಮಂಡ್ಯದ ಶ್ರೀರಂಗಪಟ್ಟಣದ ಸಂತೆಮಾಳದ ಬಳಿಯ ಕಾವೇರಿ ನದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವಗಳು ತೇಲಿ ಬಂದಿವೆ.
ಸ್ಥಳೀಯರೊಬ್ಬರ ಮಾಹಿತಿ ಮೇರೆಗೆ ಸ್ಥಳಕ್ಕೆ ಶ್ರೀರಂಗಪಟ್ಟಣದ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಿಂದ ಶವಗಳ ಹೊರ ತೆಗೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯ ಮೃತರ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ಶುರು ಮಾಡಿದ್ದಾರೆ.
ಇನ್ನೂ ನದಿಯಲ್ಲಿ ಶವಗಳು ತೇಲುತ್ತಿದೆ ಎಂಬ ವಿಷಯ ಹಬ್ಬುತ್ತಿದ್ದಂತೆ ಜನರುಸೇತುವೆ ಮೇಲೆ ಮುಗಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಸದ್ಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.




