ಬೆಂಗಳೂರು : ರಿಷಬ್ ಶೆಟ್ಟಿ ಇದೀಗ ಕಾಂತಾರ ಪಾರ್ಟ್ 1 ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಕ್ಷೇತ್ರಕ್ಕೆ ಕುಟುಂಬದ ಜೊತೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ.
‘ಕಾಂತಾರ’ ಸಕ್ಸಸ್ ನಂತರ ಮೊದಲಿಗಿಂತ ಜವಾಬ್ದಾರಿ ಹೆಚ್ಚಾಗಿದೆ. ನಮ್ಮ ಸಿನಿಮಾಗಾಗಿ ದೊಡ್ಡ ತಂಡ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಹೊಂಬಾಳೆ ಸಂಸ್ಥೆ ಸಿಕ್ಕಿರುವುದು ಫಿಲ್ಮ್ ಮೇಕರ್‌ಗೆ ಒಂದು ಪುಣ್ಯ ಎಂದು ರಿಷಬ್ ಖುಷಿಯಿಂದ ಮಾತನಾಡಿದ್ದಾರೆ. ‘ಕಾಂತಾರ’ಗಾಗಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ ಎಂದು ರಿಷಬ್ ತಿಳಿಸಿದ್ದರು.
ಜನ ‘ಕಾಂತಾರ’ ಚಿತ್ರವನ್ನು ಗೆಲ್ಲಿಸಿದ್ದಾರೆ ಬಾಯಲ್ಲಿ ಏನು ಹೇಳಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ. ನನಗೆ ಯಾವ ಒತ್ತಡವು ಇಲ್ಲ. ಆಗ ನನಗೆ ಬಹಳ ದೊಡ್ಡ ಚಿತ್ರವಾಗಿತ್ತು. ಸಿನಿಮಾ ಯಾವಾಗಲೂ ಕಲಿಯುವ ಪ್ರೊಸೆಸ್ ಅದನ್ನು ಮಾಡುತ್ತಿದ್ದೇನೆ ಎಂದಿದ್ದರು ರಿಷಬ್.