ಬೆಂಗಳೂರು: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜನಪ್ರಿಯ ನಟ ಸಯಾಜಿ ಶಿಂಧೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಏಪ್ರಿಲ್ 11 ರಂದು ಸತಾರಾದಲ್ಲಿರುವ ಪ್ರತಿಭಾ ಆಸ್ಪತ್ರೆಗೆ ದಾಖಲಾಗಿದ್ದರು. ವರದಿಗಳ ಪ್ರಕಾರ ಹೃದಯದಲ್ಲಿ ಬ್ಲಾಕೇಜ್ ಆಗಿದೆ ಎನ್ನಲಾಗಿದೆ. ಸಯಾಜಿ ಆ್ಯಂಜಿಯೋಪ್ಲಾಸ್ಟಿ ಮಾಡಿಸಿಕೊಂಡಿದ್ದು, ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ನಟ ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು “ಹಾಯ್, ನಾನು ಚೆನ್ನಾಗಿದ್ದೇನೆ. ನನ್ನನ್ನು ಪ್ರೀತಿಸುವ ಎಲ್ಲ ಅಭಿಮಾನಿಗಳಿಗೆ, ನನ್ನೊಂದಿಗಿರುವ ಹಿತೈಷಿಗಳಿಗೆ ಹೇಳುವುದೇನೆಂದರೆ, ನೀವು ಆತಂಕ ಪಡುವ ಅಗತ್ಯವಿಲ್ಲ. ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳು “ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿʼʼಎಂದು ಕಮೆಂಟ್ ಮಾಡಿದ್ದಾರೆ.
ಮತ್ತೊಬ್ಬರು ʻʻಶೀಘ್ರವಾಗಿ ಚೇತರಿಕೆ ಕಾಣಿರಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಇನ್ನೆರಡು ದಿನಗಳಲ್ಲಿ ಸಯಾಜಿ ಶಿಂಧೆ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
https://www.instagram.com/p/C5qDt7Gp3ys/