ಮಂಡ್ಯ : ಎಸ್ಎಲ್‌ಸಿ ಪಾಸಾಗಿದ್ದು, ಈ ವಿದ್ಯಾರ್ಹತೆಗೆಲ್ಲಾ ಯಾವ್ ಒಳ್ಳೆ ಕೆಲಸ ಸಿಗುತ್ತಪ್ಪಾ ಎಂದು ಇನ್ನು ನಿರುದ್ಯೋಗಿಗಳಾಗೆ ಇರುವವರು ಅಥವಾ ಈಗಷ್ಟೆ ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಮಂಡ್ಯದಲ್ಲಿದೆ ಭರ್ಜರಿ ಉದ್ಯೋಗಾವಕಾಶ. ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನರು( ಪೀವನ್) ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಕುರಿತ ಇನ್ನಷ್ಟು ಮಾಹಿತಿಗಳನ್ನು ಕೆಳಗಿನಂತೆ ನೀಡಿದ್ದು, ಸರ್ಕಾರಿ ಹುದ್ದೆ ಬೇಕಾದವರು ಅರ್ಜಿ ಸಲ್ಲಿಸಿ.
ನೇಮಕಾತಿ ಪ್ರಾಧಿಕಾರ : ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯ.
ಹುದ್ದೆ ಹೆಸರು : ಜವಾನರು (ಪೀವನ್)
ಹುದ್ದೆಗಳ ಸಂಖ್ಯೆ : 41
ವೇತನ ಶ್ರೇಣಿ : ರೂ.17000-28950.
ಮಂಡ್ಯ ಜಿಲ್ಲಾ ಕೋರ್ಟ್ ಜವಾನ ಹುದ್ದೆಗಳಿಗೆ ಅರ್ಜಿ ಹಾಕಲು ಅರ್ಹತೆಗಳು
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.
ಅರ್ಜಿ ಹಾಕಲು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದವರಿಗೆ 35, ಒಬಿಸಿ ವರ್ಗದವರಿಗೆ 38, ಎಸ್‌ಸಿ / ಎಸ್‌ಟಿ, ಪವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸು ಮೀರಿರಬಾರದು.
ಆಯ್ಕೆ ವಿಧಾನ : 10ನೇ ತರಗತಿಯ ಗರಿಷ್ಠ ಅಂಕಗಳ ಆಧಾರದಲ್ಲಿ, 1 ಹುದ್ದೆಗೆ 10 ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
– ಮಂಡ್ಯ ಜಿಲ್ಲಾ ಕೋರ್ಟ್ ವೆಬ್ ವಿಳಾಸಕ್ಕೆ https://mandya.dcourts.gov.in/online-recruitment/ಭೇಟಿ ನೀಡಿ.
– ತೆರೆದ ವೆಬ್‌ಪೇಜ್‌ನಲ್ಲಿ ‘Post Of Peon’ ಮೆನು ಕೆಳಗಡೆ ‘Click Here To Apply Online’ ಎಂದಿರುವಲ್ಲಿ ಕ್ಲಿಕ್ ಮಾಡಿ.
– ಮತ್ತೊಂದು ವೆಬ್‌ಪೇಜ್ ತೆರೆಯುತ್ತದೆ. ಇದರಲ್ಲಿ ‘Online Application’ ಎಂದಿರುವಲ್ಲಿ ಕ್ಲಿಕ್ ಮಾಡಿ.
– ಸೂಚನೆಗಳ ಪಟ್ಟಿ ಪ್ರದರ್ಶಿತವಾಗುತ್ತದೆ. ಓದಿಕೊಳ್ಳಿ.
– ‘Apply’ ಎಂದಿರುವಲ್ಲಿ ಕ್ಲಿಕ್ ಮಾಡಿ, ಅರ್ಜಿ ಸಲ್ಲಿಸಿ.
ಅಪ್ಲಿಕೇಶನ್ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.150.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 , ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಪ್ರಕ್ರಿಯೆಯ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ : 03-05-2024
ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಕೊನೆ ದಿನಾಂಕ : 03-06-2024 ರ ರಾತ್ರಿ 11-59 ಗಂಟೆವರೆಗೆ.
ಆನ್‌ಲೈನ್ ಸೇವೆಗಳ ಮೂಲಕ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 04-06-2024 ರ ರಾತ್ರಿ 11-59 ಗಂಟೆವರೆಗೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ವಿದ್ಯಾರ್ಹತೆಯ ಅಂಕಪಟ್ಟಿಗಳು
ಜಾತಿ ಮತ್ತು ಅದಾಯ ಪ್ರಮಾಣ ಪತ್ರ
ಮೀಸಲಾತಿ ಕೋರುವವರು ಸಂಬಂಧಿತ ಪ್ರಮಾಣ ಪತ್ರ.
ಭಾವಚಿತ್ರ ಮತ್ತು ಸಹಿ ಸ್ಕ್ಯಾನ್ ಕಾಪಿ.
ಇತರೆ.